ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ಕಾವೇರಿ ನೀರಿನ ದರ ಏರಿಕೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಜಲಮಂಡಳಿಯ ಪಂಪ್ ಹೌಸ್ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶೀಘ್ರವೇ ಕಾವೇರಿ ನೀರಿನ ದರ ಏರಿಕೆ ಮಾಡಲಾಗುತ್ತದೆ, ಯಾವಾಗಿನಿಂದ ಏರಿಕೆ ಮಾಡಲಾಗುತ್ತದೆ ಎಂಬುದನ್ನು ಮುಂದೆ ಹೇಳುತ್ತೇನೆ ಎಂದು ಹೇಳಿದರು.
ಬಿಬಿಎಂಪಿ ವ್ಯಾಪ್ತಿಗೆ ಸೇರಿರುವ 110 ಹಳ್ಳಿಗಳಿಗೆ ಕಾವೇರಿ ನೀರು ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕೆಂಗೇರಿ ಬಳಿ ನಡೆಯುತ್ತಿರುವ ಪೈಪ್ಲೈನ್ ಅಳವಡಿಕೆ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದೆ. ಕಾವೇರಿ 5ನೇ ಹಂತದ ಯೋಜನೆಯಡಿ ಒಟ್ಟು 110 ಹಳ್ಳಿಗಳಿಗೆ 775 ಎಂಎಲ್ಡಿ ನೀರು ಹರಿಸಲು ಉದ್ದೇಶಿಸಲಾಗಿದೆ. ಇದರಿಂದಾಗಿ ಈ ಭಾಗದಲ್ಲಿ ನೀರಿನ ಬವಣೆ ನೀಗಲಿದೆ ಎಂದರು.