ರಾಜ್ಯದ ಜನತೆ ಮತ್ತೊಂದು ಶಾಕ್: ಖಾಸಗಿ ವಾಹನಗಳ ಬಾಡಿಗೆ ದರ ಹೆಚ್ಚಳ

ಹೊಸದಿಗಂತ ಡಿಜಿಟಲ್ ಡೆಸ್ಕ್

ರಾಜ್ಯದ ಜನತೆ ಇದೀಗ ಮತ್ತೊಂದು ಶಾಕ್ ಕಾದಿದೆ. ಗ್ಯಾಸ್ , ಪೆಟ್ರೋಲ್, ಡೀಸೆಲ್ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಇದೀಗ ಖಾಸಗಿ ವಾಹನಗಳ ಬಾಡಿಗೆ ದರವನ್ನು ಶೇ.10ರಷ್ಟು ಹೆಚ್ಚಳ ಮಾಡೋದಕ್ಕೆ ಸಂಘ ನಿರ್ಧರಿಸಿದೆ.
ಈ ಬಗ್ಗೆ ಖಾಸಗೀ ವಾಹನ ಮಾಲೀಕರ ಸಂಘದ ಅಧ್ಯಕ್ಷ ರಾಮಕೃಷ್ಣ ಮಾಹಿತಿ ಹಂಚಿಕೊಂಡಿದ್ದು, ಕಳೆದ ಕೆಲ ದಿನಗಳಿಂದ ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿವೆ. ಈ ಹಿನ್ನೆಲೆ ಖಾಸಗಿ ವಾಹನಗಳ ಬಾಡಿಗೆ ದರ ಹೆಚ್ಚಳ ಮಾಡದಿದ್ದರೇ ನಮಗೂ ಕಷ್ಟವಾಗಲಿದೆ. ಹೀಗಾಗಿ ಖಾಸಗಿ ವಾಹನಗಳ ಬಾಡಿಗೆ ದರವನ್ನು ಶೇ.10ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!