ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ನಡೆಸಿದ ಆಪರೇಷನ್ ಸಿಂದೂರ್ ವೇಳೆ ಟರ್ಕಿ ಪಾಕಿಸ್ತಾನಕ್ಕೆ ಬೆಂಬಲಿಸಿದೆ. ಸಾಲದಕ್ಕೆ ಭಾರತದ ಮೇಲೆ ದಾಳಿ ಮಾಡಲು ಪಾಕ್ಗೆ ಡ್ರೋನ್ ಕೊಟ್ಟಿದೆ ಎನ್ನುವ ಅಂಶ ಬಯಲಿಗೆ ಬಂದಿದೆ. ಇದರ ಬೆನ್ನಲ್ಲೇ ಇದೀಗ ಭಾರತ, ಸಹ ಟರ್ಕಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದು, ಸೆಲೆಬಿ ಏರ್‌ಪೋರ್ಟ್ ಸರ್ವೀಸಸ್‌ಗೆ ಭದ್ರತಾ ಅನುಮತಿಯನ್ನು ರದ್ದುಗೊಳಿಸಲಾಗಿದೆ.
ಈ ಸಂಬಂಧ ಭಾರೀಯ ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ ಅಧಿಕೃತ ಆದೇಶ ಹೊರಡಿಸಿದೆ.
ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಸೆಲೆಬಿ ಏರ್‌ಪೋರ್ಟ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ನೀಡಲಾಗಿದ್ದ ಭದ್ರತಾ ಅನುಮತಿಯನ್ನು ರದ್ದುಗೊಳಿಸಿ ತಕ್ಷಣದಿಂದ ಜಾರಿಗೆ ಬರುವಂತೆ ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ ಇಂದು ಆದೇಶ ಹೊರಡಿಸಿದೆ. ಈ ಮೂಲಕ ಟರ್ಕಿಗೆ ಮತ್ತೊಂದು ಶಾಕ್ ಕೊಟ್ಟಿದೆ.
ಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 1 ಮತ್ತು 2ನೇ ಟರ್ಮಿನಲ್‌ಗಳಲ್ಲಿ ಟರ್ಕಿ ಮೂಲದ ಕಂಪನಿಯಾದ ಸೆಲೆಬಿ, ಬ್ರಿಡ್ಜ್ ಮೌಂಟೆಡ್ ಸಲಕರಣೆಗಳ ಸ್ಥಾಪಿಸಿದ್ದು, ಮತ್ತು ನಿರ್ವಹಣೆಯ ಸೇವೆಯನ್ನು 2022ರಿಂದ ಒದಗಿಸುತ್ತಿದೆ. ಟರ್ಕಿಯ ಗ್ರೌಂಡ್ ಹ್ಯಾಂಡ್ಲಿಂಗ್ ಸಂಸ್ಥೆ ಸೆಲೆಬಿ ಏರ್‌ಪೋರ್ಟ್ ಸರ್ವೀಸಸ್ ಬೆಂಗಳೂರು ಮಾತ್ರವಲ್ಲದೇ ದೆಹಲಿ ಮತ್ತು ಮುಂಬೈ ಸೇರಿದಂತೆ ಭಾರತ ಇತರೆ ವಿಮಾನ ನಿಲ್ದಾಣಗಳಿಗೂ ಸೇವೆಯನ್ನು ನೀಡುತ್ತಿದೆ.ಇದಕ್ಕೂ ಭಾರತ ಬ್ರೇಕ್ ಹಾಕಿದೆ.