ಆಪ್ ಗೆ ಮತ್ತೊಂದು ಶಾಕ್: ಜೈಲಿನಲ್ಲಿರುವ ಸತ್ಯೇಂದ್ರ ಜೈನ್ ವಿರುದ್ದ ಸಿಬಿಐ ತನಿಖೆಗೆ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಬಳಿಕ ಆಪ್ ಗೆ ಮತ್ತೊಂದು ಶಾಕ್ ಎದುರಾಗಿದ್ದು, ಸರಿಸುಮಾರು 2 ವರ್ಷಗಳಿಂದ ಜೈಲಿನಲ್ಲಿರುವ ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ದ ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ ಸತ್ಯೇಂದ್ರ ಜೈನ್, ತಿಹಾರ್ ಜೈಲಿನಿಂದ ಕೋಟಿ ಕೋಟಿ ರೂಪಾಯಿ ಸುಲಿಗೆ ಮಾಡಿದ್ದಾರೆ ಅನ್ನೋ ಆರೋಪದ ಕುರಿತು ತನಿಖೆಯನ್ನು ಸಿಬಿಐಗೆ ನೀಡಲಾಗಿದೆ.

ಸತ್ಯೇಂದ್ರ ಜೈನ್‌ ಹಾಗೂ ಮಾಜಿ ಜೈಲಧಿಕಾರಿ ರಾಜ್‌ ಕುಮಾರ್‌ ಸೇರಿದಂತೆ ಹಲವರು ವಂಚಕ ಸುಕೇಶ್‌ ಚಂದ್ರಶೇಖರ್‌ ಸೇರಿದಂತೆ ಹಲವು ಕೈದಿಗಳೀಗೆ ಕಾರಾಗೃಹದಲ್ಲಿ ಸುಖ-ವೈಭೋಗ ಕಲ್ಪಿಸಲು ಸುಲಿಗೆ ಮಾಡಿದ್ದಾರೆ ಅನ್ನೋ ಆರೋಪ ಗಂಭೀರವಾಗಿದೆ. ಈ ಕುರಿತು ಹಲವು ದಾಖಲೆಗಳು ಲಭ್ಯವಾಗಿದೆ.

ಇತ್ತ ವಂಚಕ ಸುಕೇಶ್ ಕೂಡ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ವಂಚಕ ಸುಕೇಶ್ ಚಂದ್ರಶೇಖರ್ ಸೇರಿದಂತೆ ಇತರ ಪ್ರಮುಖ ಕೈದಿಗಳಿಗೆ ಜೈಲಿನಲ್ಲಿ ಸುಖ ವೈಭೋಗ ಕಲ್ಪಿಸಲು ಸತ್ಯೇಂದ್ರ ಜೈನ್ ಕಂತುಗಳಲ್ಲಿ 10 ಕೋಟಿ ರೂಪಾಯಿ ಪಡೆದಿದ್ದಾರೆ ಅನ್ನೋ ಆರೋಪಕ್ಕೆ ಹಲವು ಸಾಕ್ಷ್ಯಗಳು ಲಭ್ಯವಾಗಿತ್ತು.

ಈ ಸಾಕ್ಷ್ಯಗಳ ಆಧಾರದಲ್ಲಿ ಸತ್ಯೇಂದ್ರ ಜೈನ್ ವಿರುದ್ಧ ಹೆಚ್ಚಿನ ತನಿಖೆ ನಡೆಸಲು ಸಿಬಿಐ ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗ ಅನುಮತಿ ನೀಡುವಂತೆ ಮನವಿ ಮಾಡಿತ್ತು. ಈ ಕುರಿತು ಲೆಫ್ಟಿನೆಂಟ್ ಗವರ್ನರ್ ಈ ವರ್ಷದ ಆರಂಭದಲ್ಲಿ ಸಿಬಿಐ ತನಿಖೆಗೆ ಅನುಮತಿ ನೀಡಿದ್ದರು. ಈ ಅನುಮತಿ ಬಳಿಕ ಕೇಂದ್ರ ಗೃಹ ಸಚಿವಾಲಯ ಇದೀಗ ಸಿಬಿಐ ತನಿಖೆಗೆ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!