October 15, 2026
Thursday, October 15, 2026
spot_img

ಕಾಂಗ್ರೆಸ್‌ಗೆ ಮತ್ತೊಂದು ಆಘಾತ: ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ನ ಹಿರಿಯ ಮುಖಂಡ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಆಸ್ಪತ್ರೆಯಲ್ಲಿ ನಿಧನ

ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಚಂದ್ರಶೇಖರಪ್ಪ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರಲಾಗುತ್ತಿದ್ದು, ಅಂತ್ಯಕ್ರಿಯೆ ಕುಟುಂಬದ ನಿರ್ಧಾರದಂತೆ ನಡೆಯಲಿದೆ.

ಇದನ್ನೂ ಓದಿ:

ರಾಜಕೀಯ ಪಯಣ

1999ರಿಂದ 2004ರವರೆಗೆ ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದ ಅವರು, ಕಾಂಗ್ರೆಸ್‌ನ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು.

ಹಲವು ಹುದ್ದೆಗಳಲ್ಲಿ ಸೇವೆ

ಮಾಜಿ ಶಾಸಕರ ವೇದಿಕೆಯ ರಾಜ್ಯ ಅಧ್ಯಕ್ಷ, ವೀರಶೈವ-ಲಿಂಗಾಯತ ಮಹಾಸಭಾದ ಮಾಜಿ ರಾಜ್ಯ ಉಪಾಧ್ಯಕ್ಷ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ನಗರಸಭೆ ಅಧ್ಯಕ್ಷರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

ಚಂದ್ರಶೇಖರಪ್ಪ ಅವರ ನಿಧನಕ್ಕೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ಸೂಚಿಸಿದ್ದಾರೆ.

Must Read