‘ಕಮಲ’ ಪಡೆಗೆ ಮತ್ತೊಂದು ಶಾಕ್: ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ‘ಕೈ’ ಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರಿದ್ದಾರೆ. ಇಂದು ವಿವೇಕ್ ಹೆಬ್ಬಾರ್ ಅವರು ಬನವಾಸಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ಅವರು ವಿವೇಕ್ ಹೆಬ್ಬಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ.

ಆದರೆ, ಶಾಸಕ ಶಿವರಾಮ್ ಹೆಬ್ಬಾರ್ ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದ್ದು. ಅವರ ಮಗ ಕಾಂಗ್ರೆಸ್ ಸೇರಿದ್ದು, ಶಿವರಾಮ್ ಹೆಬ್ಬಾರ್ ನಡೆ ಬಗ್ಗೆ ಕುತೂಹಲ ಹೆಚ್ಚಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!