ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳಕ್ಕೆ ಮತ್ತೊಂದು ಶಾಕಿಂಗ್ ನ್ಯೂಸ್ ಸಿಕ್ಕಿದೆ. ಇಲ್ಲಿನ ಪಡನ್ನಕ್ಕಾಡ್ ಕೃಷಿ ಕಾಲೇಜು ಹಾಸ್ಟೆಲ್‌ನ ವಿದ್ಯಾರ್ಥಿಗಳಲ್ಲಿ ಹೆಚ್3ಎನ್2, ಎಚ್1ಎನ್1 ಸೋಂಕು ದೃಢಪಟ್ಟಿದ್ದು, ಆರೋಗ್ಯ ಇಲಾಖೆ ಅಲರ್ಟ್ ಆಗಿದೆ.
ಮೂಲಗಳ ಮಾಹಿತಿ ಪ್ರಕಾರ ಈ ಹಾಸ್ಟೆಲ್‌ನ ಐವರು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.
ಅನಾರೋಗ್ಯ ಬಾಧಿಸಿದ ಹಿನ್ನೆಲೆಯಲ್ಲಿ ಇವರ ರಕ್ತದ ಮಾದರಿಯನ್ನು ಆಲಪ್ಪುಳ ವೈರಾಲಜಿ ಇನ್‌ಸ್ಟಿಟ್ಯೂಟ್‌ಗೆ ಕಳುಹಿಸಲಾಗಿತ್ತು. ಇದೀಗ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.