ಕಾಂಗ್ರೆಸ್‌ ಗೆ ಮತ್ತೊಂದು ಶಾಕ್‌: ಗುಲಾಂ ನಬಿ ಬೆನ್ನಲ್ಲೇ ಇನ್ನೊಬ್ಬ ಕಾಂಗ್ರೆಸ್‌ ಮುಖಂಡನ ರಾಜೀನಾಮೆ !

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಕಾಂಗ್ರೆಸ್‌ ಪಕ್ಷಕ್ಕೀಗ ಒಂದಾದ ಮೇಲೊಂದು ಆಘಾತ ಎದುರಾಗುತ್ತಿದೆ. ಪಕ್ಷದ ಹಿರಿಯ ಮುಖಂಡರು ಅಥವಾ ಪಕ್ಷದಲ್ಲಿ ಬಹುಕಾಲದಿಂದ ಇದ್ದ ಹಿರಿಯ ಸದ್ಯರೆನಿಸಿಕೊಂಡವರು ಪಕ್ಷವನ್ನು ತೊರೆಯುತ್ತಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಮುತ್ಸದ್ಧಿ ನಾಯಕ ಗುಲಾಂ ನಬೀ ಆಜಾದ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಈಗ ಮತ್ತೊಬ್ಬ ಪಕ್ಷದ ಹಿರಿಯ ಸದಸ್ಯ ರಾಜೀನಾಮೆ ನೀಡಿದ್ದಾರೆ.

ತೆಲಂಗಾಣದ ಹಿರಿಯ ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಎಂಎ ಖಾನ್‌ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕತ್ವಕ್ಕೆ ಬರೆದ ಪತ್ರದಲ್ಲಿ ಖಾನ್, “ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ತನ್ನ ಹಿಂದಿನ ಹಿರಿಮೆಯನ್ನು ಮರಳಿ ಪಡೆಯಲು ಮತ್ತು ದೇಶವನ್ನು ಮುನ್ನಡೆಸಬಹುದು ಎಂದು ಸಾರ್ವಜನಿಕರನ್ನು ಮನವೊಲಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ” ಎಂದು ಹೇಳಿದ್ದಾರೆ.

ಪಕ್ಷದ ಸಮಿತಿಯ ಉಪಾಧ್ಯಕ್ಷ ಸ್ಥಾನವನ್ನು ರಾಹುಲ್ ಗಾಂಧಿ ನಿಭಾಯಿಸಿದ ನಂತರ ಪಕ್ಷವು ಇಳಿಮುಖ ಪಯಣವನ್ನು ಕಂಡಿತು. ಅವರು ತಮ್ಮದೇ ಆದ ವಿಭಿನ್ನ ಆಲೋಚನಾ ಪ್ರಕ್ರಿಯೆಯನ್ನು ಹೊಂದಿದ್ದಾರೆ, ಇದು ಬ್ಲಾಕ್ ಮಟ್ಟದಿಂದ ಬೂತ್ ಮಟ್ಟದವರೆಗೂ ಯಾವುದೇ ಸದಸ್ಯರೊಂದಿಗೆ ಹೊಂದಿಕೆಯಾಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜೀನಾಮೆ ಪತ್ರದಲ್ಲಿ ಖಾನ್‌ ಉಲ್ಲೇಖಿಸಿದ ಅಂಶಗಳ ಸಾರ ಹೀಗಿದೆ. “ವಿದ್ಯಾರ್ಥಿ ದಿನಗಳಿಂದ ನಾಲ್ಕು ದಶಕಗಳಿಂದ ಪಕ್ಷದೊಂದಿಗೆ ಬಾಂಧವ್ಯ ಹೊಂದಿದ್ದೇನೆ. ಪಕ್ಷದ ತಳಮಟ್ಟದ ಕಾರ್ಯಕರ್ತರನ್ನು ಪುನಃ ಸಕ್ರಿಯಗೊಳಿಸಲು ಮತ್ತು ಪಂಡಿತ್ ನೆಹರು, ಇಂದಿರಾಗಾಂಧಿ ಅವರ ನೇತೃತ್ವದಲ್ಲಿ ಪಕ್ಷವು ಪ್ರದರ್ಶಿಸಿದ ಅದೇ ಬದ್ಧತೆ ಮತ್ತು ಸಮರ್ಪಣೆಯೊಂದಿಗೆ ದೇಶ ಸೇವೆಯನ್ನು ಮುಂದುವರಿಸಲು ಉನ್ನತ ನಾಯಕತ್ವವು ಯಾವುದೇ ಪ್ರಯತ್ನಗಳನ್ನು ಮಾಡದ ಕಾರಣ ಹಿರಿಯ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಬೇಕಾಯಿತು. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಪಕ್ಷದ ಕಾರ್ಯಾಚರಣೆಗಳಲ್ಲಿ ಭಾಗವಹಿಸುವುದನ್ನು ನಿಲ್ಲಿಸುವುದನ್ನು ಬಿಟ್ಟು ನನಗೆ ಬೇರೆ ದಾರಿ ಇರಲಿಲ್ಲ”

“ಆದ್ದರಿಂದ, ಕಾಂಗ್ರೆಸ್ ಪಕ್ಷದ ವ್ಯವಹಾರಗಳಿಂದ ನನ್ನನ್ನು ಬೇರ್ಪಡಿಸುವುದನ್ನು ಹೊರತುಪಡಿಸಿ ನನಗೆ ಬೇರೆ ಆಯ್ಕೆಗಳಿಲ್ಲ, ಈ ಮೂಲಕ ತಕ್ಷಣವೇ ಜಾರಿಗೆ ಬರುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನನ್ನ ರಾಜೀನಾಮೆಯನ್ನು ನೀಡುತ್ತೇನೆ” ಎಂದು ಅವರು ಬರೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!