I.N.D.I.A ಮೈತ್ರಿಕೂಟಕ್ಕೆ ಮತ್ತೆ ಶಾಕ್: ಏಕಾಂಗಿ ಸ್ಫರ್ಧೆ ಘೋಷಿಸಿದ ಟಿಎಂಸಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಆದ್ರೆ ವಿಪಕ್ಷಗಳ ಮೈತ್ರಿಕೂಟ ಇಂಡಿಯಾದಲ್ಲಿ ಮಾತ್ರ ಯಾಕೋ ಎಲ್ಲವೂ ಸರಿ ಇಲ್ಲದಿರುವುದು ಸ್ಪಷ್ಟವಾಗಿ ಗೋಚರವಾಗಿದೆ.

ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್​ಗೆ ಮತ್ತೊಮ್ಮೆ ಹಿನ್ನಡೆಯಾಗಿದ್ದು, ಈ ಬಾರಿ ಟಿಎಂಸಿ ಮೇಲುಗೈ ಸಾಧಿಸಿದೆ.

ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಕ್ಷೇತ್ರಗಳಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಫರ್ಧಿಸಲಿದ್ದು, ಅಸ್ಸಾಂ ಹಾಗೂ ಮೇಘಾಲಯದಲ್ಲೂ ತಮ್ಮ ಪಕ್ಷ ಕಣಕ್ಕಿಳಿಯಲಿದೆ ಎಂದು ರಾಜ್ಯಸಭಾ ಸದಸ್ಯ ಡೆರೆಕ್​ ಒ’ಬ್ರೇನ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಡೆರೆಕ್​, ಟಿಎಂಸಿ ಅಧ್ಯಕ್ಷೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಂಗಾಳದ ಎಲ್ಲಾ 42 ಸ್ಥಾನಗಳಲ್ಲಿ ಟಿಎಂಸಿ ಸ್ಫರ್ಧಿಸುತ್ತದೆ ಎಂದು ಹೇಳಿದ್ದರು. ನಾವು ಅಸ್ಸಾಂನ ಕೆಲವು ಸ್ಥಾನಗಳಲ್ಲಿ ಮತ್ತು ಮೇಘಾಲಯದ ತುರಾ ಲೋಕಸಭಾ ಕ್ಷೇತ್ರದಲ್ಲಿಯೂ ಸ್ಫರ್ಧಿಸುತ್ತೇವೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ, ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಸ್ಫರ್ಧಿಸುತ್ತೇನೆ. ನಾನು ಯಾವಾಗಲೂ ಹೇಳುತ್ತೇನೆ, ದೇಶದಲ್ಲಿ ಏನು ಮಾಡಲಾಗುವುದು ಎಂಬುದರ ಬಗ್ಗೆ ನನಗೆ ಕಾಳಜಿ ಇಲ್ಲ ಆದರೆ ನಾವು ಜಾತ್ಯತೀತ ಪಕ್ಷ ಹಾಗಾಗಿ ಬಂಗಾಳದಲ್ಲಿ ಬಿಜೆಪಿಯನ್ನು ಏಕಾಂಗಿಯಾಗಿ ಸೋಲಿಸುತ್ತೇವೆ ಎಂದು ಈ ಹಿಂದೆ ಮಮತಾ ಬ್ಯಾನರ್ಜಿ ಹೇಳಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!