ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಇದರ ನಡುವೆ ವಿಪಕ್ಷಗಳ ಮೈತ್ರಿಕೂಟ ಇಂಡಿಯಾಗೆ ಒಂದಲ್ಲ ಒಂದು ರೀತಿಯಲ್ಲಿ ಅಡಚಣೆ ಎದುರಾಗುತ್ತಿದ್ದು, ಇದೀಗ ಸಮಾಜವಾದಿ ಪಾರ್ಟಿಯ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಸಮಾಜವಾದಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಉತ್ತರಪ್ರದೇಶ ವಿಧಾನಪರಿಷತ್ತಿಗೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಣೆ ಹೊರಡಿಸಿರುವ ಸ್ವಾಮಿ ಪ್ರಸಾದ್ ಮೌರ್ಯ, ನನಗೆ ಸ್ವಚ್ಛ ರಾಜಕಾರಣದಲ್ಲಿ ನಂಬಿಕೆ ಇದೆ, ನಾನು ಅಖಿಲೇಶ್ ಯಾದವ್ ಅವರನ್ನು ನೋಡಿದ್ದೇನೆ, ಅವರು ಸಮಾಜವಾದಿ ಸಿದ್ಧಾಂತಕ್ಕೆ ವಿರುದ್ಧವಾಗಿದ್ದರು. ಮುಲಾಯಂ ಸಿಂಗ್ ಅವರೊಂದಿಗೆ ಕೆಲಸ ಮಾಡಿದ ಅನುಭವವೂ ನನಗೆ ಇದೆ. ಅವರು ಕಟ್ಟಾ ಸಮಾಜವಾದಿ ನಾಯಕರಾಗಿದ್ದರು.ನೈತಿಕತೆ ಆಧಾರದ ಮೇಲೆ ನಾನು ಸಮಾಜವಾದಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಉತ್ತರಪ್ರದೇಶ ವಿಧಾನಪರಿಷತ್ತಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅಖಿಲೇಶ್ ಯಾದವ್ಗೆ ಬರೆದಿರುವ ಪತ್ತರದಲ್ಲಿ ಉಲ್ಲೇಖಿಸಲಾಗಿದೆ.
ಇತ್ತ ಸಮಾಜವಾದಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ಸ್ವಾಮಿ ಪ್ರಸಾದ್ ಮೌರ್ಯ ಬಿಜೆಪಿಗೆ ಮರಳುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ. ಇದರ ಜೊತೆಗೆ ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರು ತಮ್ಮದೇ ಆದ ಹೊಸದೊಂದು ರಾಜಕೀಯ ಪಕ್ಷವನ್ನು ಘೋಷಿಸುವ ಸಾಧ್ಯತೆ ದಟ್ಟವಾಗಿದೆ.