Sunday, June 4, 2023

Latest Posts

ಅಮೆರಿಕದಲ್ಲಿ ಮತ್ತೆ ಗುಂಡಿನ ದಾಳಿ, ಈ ವರ್ಷದ 146ನೇ ದಾಳಿಯಿದು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ.

ಕೆಂಟುಕಿಯ ಲೂಯಿಸ್‌ವಿಲ್ಲೆಯಲ್ಲಿ ಶೂಟೌಟ್ ನಡೆದಿದ್ದು, ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 24 ವರ್ಷದ ಬ್ಯಾಂಕ್ ಸಿಬ್ಬಂದಿ ಏಕಾಏಕಿ ಸಿಕ್ಕಸಿಕ್ಕವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ.

ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಆರೋಪಿ ಪೊಲೀಸರಿಗೂ ಗುಂಡು ಹಾರಿಸಲು ಯತ್ನಿಸಿದ್ದಾನೆ, ಪೊಲೀಸರ ಗುಂಡು ಆರೋಪಿಗೆ ತಗುಲಿದ್ದು, ಆತ ಮೃತಪಟ್ಟಿದ್ದಾನೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಕೆಲವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಗನ್‌ವಯಲೆನ್ಸ್ ಆರ್ಕೈವ್ ಪ್ರಕಾರ 2023ರಲ್ಲಿ ನಡೆದ 146ನೇ ಶೂಟೌಟ್ ಪ್ರಕರಣ ಇದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!