ಮತ್ತೊಬ್ಬ ಸೆಕ್ಯುರಿಟಿ ಗಾರ್ಡ್ ಮೇಲೆ ಮಹಿಳೆ ಹಲ್ಲೆ: ನೋಯ್ಡಾದಲ್ಲಿ ಇದು 2ನೇ ಘಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭದ್ರತಾ ಸಿಬ್ಬಂದಿ ಮೇಲೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಮತ್ತೊಂದು ಘಟನೆ ನೋಯ್ಡಾದಲ್ಲಿ ನಡೆದಿದೆ. ಕಳೆದ ತಿಂಗಳು ನೋಯ್ಡಾದಲ್ಲಿಯೇ ಭದ್ರತಾ ಸಿಬ್ಬಂದಿ ಮೇಲೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿರುವುದು ಗಮನಾರ್ಹ.

ನೋಯ್ಡಾದ 3ನೇ ಹಂತ ಪೊಲೀಸ್ ಠಾಣೆ ವ್ಯಾಪ್ತಿಯ ಕ್ಲಿಯೋ ಕೌಂಟಿಯಲ್ಲಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಭದ್ರತಾ ಸಿಬ್ಬಂದಿ ನೋಯ್ಡಾದ ಕೊಟ್ವಾಲಿ ಪ್ರದೇಶದ 3 ನೇ ಹಂತದ ಅಪಾರ್ಟ್ಮೆಂಟ್ನ ಗೇಟ್ ತೆಗೆಯಲು ವಿಳಂಬ ಮಾಡಿದ್ದಕ್ಕೆ ಕೋಪಗೊಂಡ ಮಹಿಳೆ ಭದ್ರತಾ ಸಿಬ್ಬಂದಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಸೆಕ್ಯೂರಿಟಿ ದೂರಿನ ಆಧಾರದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಇದೀಗ ಈ ವಿಡಿಯೋ ವೈರಲ್ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!