ತಮಿಳುನಾಡಿನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಶವವಾಗಿ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ತಮಿಳುನಾಡಿನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ.
ತಿರುವಳ್ಳೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಶಾಲೆಯ 12ನೇ ತರಗತಿಯ ವಿದ್ಯಾರ್ಥಿನಿ ಸೋಮವಾರ ತನ್ನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿನಿಯ ಕೊಠಡಿಯಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ವಿದ್ಯಾರ್ಥಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈಗಲೇ ನಾವು ಹೆಚ್ಚಿಗೆ ಏನನ್ನೂ ಹೇಳಲಾಗದು. ಪ್ರಕರಣವನ್ನು ರಾಜ್ಯ ಪೊಲೀಸರ ಸಿಬಿ-ಸಿಐಡಿ ವಿಭಾಗಕ್ಕೆ ವರ್ಗಾಯಿಸಲಾಗಿದೆ’ ಎಂದು ತಿರುವಳ್ಳೂರಿನ ಪೊಲೀಸ್ ವರಿಷ್ಠಾಧಿಕಾರಿ ಸೆಫಾಸ್ ಕಲ್ಯಾಣ್ ತಿಳಿಸಿದ್ದಾರೆ.
ವಿದ್ಯಾರ್ಥಿನಿ ಸರಳಾ ತಮಿಳುನಾಡಿನ ತಿರುಟ್ಟಣಿಯವರಾಗಿದ್ದು, ಯಾವುದೇ ಕಾನೂನು ಸುವ್ಯವಸ್ಥೆ ಹದಗೆಡದಂತೆ ಆಕೆಯ ಗ್ರಾಮದಲ್ಲಿಯೂ ಭದ್ರತೆ ಕೈಗೊಳ್ಳಲಾಗಿದೆ.
ಈ ಹಿಂದೆ ಜುಲೈ 13 ರಂದು, ಕಲ್ಲಕುರಿಚಿ ಜಿಲ್ಲೆಯ ಶಾಲೆಯೊಂದರ 12 ನೇ ತರಗತಿಯ ವಿದ್ಯಾರ್ಥಿನಿ ತನ್ನ ಹಾಸ್ಟೆಲ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಗಿತ್ತು. ಸಾವು ಖಂಡಿಸಿ ನಡೆದ ಪ್ರತಿಭಟನೆ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರಿಗೆ ಗಾಯಗಳಾಗಿದ್ದವು. ಪ್ರತಿಭಟನಾಕಾರರು ಕನಿಷ್ಠ 15 ಬಸ್‌ಗಳಿಗೆ ಬೆಂಕಿ ಹಚ್ಚಿದ್ದರು.
ಆಕೆಯ ಶಾಲೆಯ ಪ್ರಾಂಶುಪಾಲರು ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಶಿಕ್ಷಕರನ್ನು ತನ್ನ ಶೈಕ್ಷಣಿಕ ಸಾಧನೆಗಾಗಿ ಅವಮಾನಿಸಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಳು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!