Monday, August 8, 2022

Latest Posts

ಮಹಾರಾಷ್ಟ್ರದಲ್ಲಿ ಮತ್ತೋರ್ವ ಶಂಕಿತ ಉಗ್ರನ ಬಂಧನ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರನ್ನು ದೆಹಲಿ ಪೊಲೀಸರು ಬಂಧಿಸಿರುವ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದ ಥಾಣೆಯ ಮುಂಬ್ರಾದಲ್ಲಿ ಮತ್ತೊಬ್ಬ ಶಂಕಿತ ಉಗ್ರನನ್ನು ಮುಂಬೈನ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್​) ಬಂಧಿಸಿದೆ.
ಶುಕ್ರವಾರ ಮುಂಬೈನ ಜೋಗೇಶ್ವರಿ ಪ್ರದೇಶದಲ್ಲಿ ಬಂಧನಕ್ಕೊಳಗಾಗಿದ್ದ ಜಾಕೀರ್ ಹುಸೇನ್ ಶೇಖ್ (45) ಎಂಬ ಶಂಕಿತ ಉಗ್ರನು ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ನಿನ್ನೆ ಮಹಾರಾಷ್ಟ್ರದ ಕೆಲ ಪ್ರದೇಶದಲ್ಲಿ ಎಟಿಎಸ್ ದಾಳಿ ನಡೆಸಿತ್ತು. ನಿನ್ನೆ ರಾತ್ರಿ ಮುಂಬ್ರಾದಲ್ಲಿ ಮತ್ತೊಬ್ಬನನ್ನು ಸೆರೆಹಿಡಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
​ಕಳೆದ ಮಂಗಳವಾರ ದೆಹಲಿ ಪೊಲೀಸರು, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಬೆಂಬಲಿತ ಭಯೋತ್ಪಾದಕ ಘಟಕವನ್ನು ಭೇದಿಸಿದ್ದರು. ಬಂಧಿತರಲ್ಲಿ ಓರ್ವ ವಿಚಾರಣೆ ವೇಳೆ ಕರ್ನಾಟಕದ ಮೈಸೂರು, ಬೆಂಗಳೂರು ಸೇರಿ ದೇಶದ ವಿವಿಧ ಭಾಗಗಳಲ್ಲಿ ವಿದ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿರುವುದಾಗಿ ಬಾಯ್ಬಿಟ್ಟಿದ್ದನು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss