ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರಿನ ಬೊಮ್ಮನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ KSRTC ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗ್ರಾಮದಲ್ಲಿ ಅಪಘಾತ ನಡೆದಿತ್ತು.ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಕಾಶಪ್ಪ (45) ಚಿಕಿತ್ಸೆ ಫಲಿಸದೇ ಸಾವನಪ್ಪಿದ್ದಾರೆ. ಯಾದಗಿರಿ ಮೂಲದ ಹನುಮಂತ (55) ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದರು. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿದ್ದ ವೇಳೆ ಬೈಕಿಗೆ ಬಸ್ ಡಿಕ್ಕಿ ಹೊಡೆದಿತ್ತು. KSRTC ಬಸ್ ನ ಕೆಳಗಡೆ ಸಿಲುಕಿ ಬೈಕ್ ನಜ್ಜುಗುಜ್ಜಾಗಿತ್ತು. ಅಪಘಾತದ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.