Tuesday, October 3, 2023

Latest Posts

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಬೈಕ್ ಗೆ ಲಾರಿ ಡಿಕ್ಕಿಯಾಗಿ ತಂದೆ-ಮಗಳು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತೊಂದು ದುರಂತ ನಡೆದಿದ್ದು, ಬೈಕ್ ಗೆ ಲಾರಿ ಡಿಕ್ಕಿಯಾಗಿ ತಂದೆ-ಮಗಳು ಮೃತಪಟ್ಟ ಘಟನೆ ನಡೆದಿದೆ.

ದೊಡ್ಡಬಳ್ಳಾಪುರದ ಎಪಿಎಂಸಿ ಮಾರುಕಟ್ಟೆ ಬಳಿ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಮ ಗಂಭೀರವಾಗಿ ಗಾಯಗೊಂಡಿದ್ದ ತಂದೆ ಸ್ಥಳದಲ್ಲೇ ಮೃತಪಟ್ಟರೆ , ಮಗಳು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಮೃತರನ್ನು ವೆಂಕಟೇಶ್ (45) ಹಾಗೂ ಪುತ್ರಿ ಯಶಸ್ವಿನಿ (16) ಎಂದು ಗುರುತಿಸಲಾಗಿದೆ ಅಪ್ಪ ಮಗಳು ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!