BREAKING NEWS | ಒಡಿಶಾದಲ್ಲಿ ಮತ್ತೊಂದು ರೈಲು ಅಪಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದ ಬಾಲಸೋರ್ ರೈಲು ದುರಂತದ ಕೆಲವೇ ದಿನಗಳ ನಂತರ ಒಡಿಶಾದಲ್ಲಿ ಮತ್ತೊಂದು ರೈಲು ಹಳಿತಪ್ಪಿದೆ.

ಬರ್ಗರ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಸುಣ್ಣದಕಲ್ಲು ಸಾಗಿಸುತ್ತಿದ್ದ ಗೂಡ್ಸ್ ರೈಲು ಇದಾಗಿದೆ ಎನ್ನುವ ಮಾಹಿತಿ ದೊರೆತಿದೆ. ಪೊಲೀಸರು ಸ್ಥಳಕ್ಕೆ ತಲುಪಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಯಾವುದೇ ಸಾವು ನೋವುಗಳ ಬಗ್ಗೆ ವರದಿಯಾಗಿಲ್ಲ.

ಈ ಗೂಡ್ಸ್ ರೈಲು ಪ್ರೈವೆಟ್ ಕಂಪನಿಯೊಂದಕ್ಕೆ ಸೇರಿದ್ದು, ಭಾರತೀಯ ರೈಲ್ವೆಗೆ ಸಂಬಂಧಿಸಿದ್ದಲ್ಲ ಎನ್ನಲಾಗಿದೆ. ರೈಲಿನ ಐದು ಬೋಗಿ ಹಳಿತಪ್ಪಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!