ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಮನೆ ಒತ್ತುವರಿ ತೆರವಿಗೆ ಸರ್ಕಾರ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ರಾಜ್ಯ ಸರ್ಕಾರ ಅಕ್ರಮವಾಗಿ ರಾಜಕಾಲುವೆ ಮೇಲೆ ಮನೆ ನಿರ್ಮಿಸಿದ ಹಿನ್ನೆಲೆಯಲ್ಲಿ ಮನೆ ಒತ್ತುವರಿ ತೆರವು ಮಾಡಲು ಸೂಚಿಸಿದೆ.
ನಟ ದರ್ಶನ್ ಮನೆ ತೆರವಿಗೆ ಪಾಲಿಕೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದ ಮೌಕಿಕ ಸೂಚನೆ ಸಿಕ್ಕಿದೆ ಎನ್ನಲಾಗಿದ್ದು, ಯಾರೇ ಒತ್ತುವರಿ ಮಾಡಿ ಸ್ಟೇ ತಂದಿದ್ದರೂ ಕಾನೂನಿನ ಪ್ರಕಾರ ತೆರವು ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ನಟ ದರ್ಶನ್ ಮನೆ ರಾಜಕಾಲುವೆ ‌ಮೇಲೆ ಇದ್ದರೂ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಇದೀಗ ಒತ್ತುವರಿಗೆ ತೆರವಿಗೆ ಸೂಚನೆ ಹಿನ್ನೆಲೆಯಲ್ಲಿ ಕ್ರಮಕ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ.

ರಾಜಧಾನಿಯಲ್ಲಿ 2016ರಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾದಾಗ ರಾಜ ಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಕಟ್ಟಡಗಳನ್ನು ತೆರವುಗೊಳಿಸಲು ಅಂದಿನ ಸಿದ್ದರಾಮಯ್ಯ ಸರ್ಕಾರ ಬಿಬಿಎಂಪಿಗೆ ಸೂಚನೆ ನೀಡಿತ್ತು. ಆಗ ಆರ್‌.ಆರ್‌. ನಗರದ ದರ್ಶನ್‌ ಅವರ ನಿವಾಸ ಕೂಡ ರಾಜ ಕಾಲುವೆಯ ಬಫರ್‌ ಜೋನ್‌ ಮೇಲೆ ನಿರ್ಮಿಸಿರುವುದು ತಿಳಿದುಬಂದಿತ್ತು.

ಐಡಿಯಲ್‌ ಹೋಮ್ಸ್‌, ದರ್ಶನ್‌, ಶಾಮನೂರು ಅವರ ಆಸ್ಪತ್ರೆ ಸೇರಿ ಹಲವು ಕಟ್ಟಡಗಳನ್ನು ತೆರವುಗೊಳಿಸುವಂತೆ ನೊಟೀಸ್ ನೀಡಲಾಗಿತ್ತು. ನೊಟೀಸ್ ನೀಡಿದ್ದರಿಂದ ದರ್ಶನ್‌ ಮತ್ತಿತರರು ಸಿವಿಲ್‌ ನ್ಯಾಯಾಲಯದಿಂದ ತಡೆಯಾಜ್ಞೆ ತಂದು, ಬಳಿಕ 2016 ಅಕ್ಟೋಬರ್‌ನಲ್ಲಿ ತೆರವು ಮಾಡದಂತೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಹೀಗಾಗಿ ಅಂದು ಒತ್ತುವರಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ದರ್ಶನ್‌ ಇದೀಗ ಬಂಧನವಾಗಿರುವ ಹಿನ್ನೆಲೆಯಲ್ಲಿ ಮನೆ ಒತ್ತುವರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!