ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆಪೊಲೀಸರು ಮೇಲ್ಮನವಿ ಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಇಂದು ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ವಕೀಲ ಅನಿಲ್ ಸಿ ನಿಶಾನಿಯಿಂದ ಅರ್ಜಿ ಸಲ್ಲಿಕೆಯಾಗಿದ್ದು, ನಟ ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಆರೋಪಿಗಳ ಜಾಮೀನು ರದ್ದು ಮಾಡಿವಂತೆ ಮನವಿ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೂ.11 ರಂದು ನಟ ದರ್ಶನ್ ಸೇರಿ ಹಲವರು ಬಂಧನಕ್ಕೊಳಗಾಗಿದ್ದರು. ಕಳೆದ ಡಿಸೆಂಬರ್ 13ರಂದು ರಾಜ್ಯ ಹೈಕೋರ್ಟ್ ದರ್ಶನ್ ಸೇರಿ 7 ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿತ್ತು.