ಅರವಿಂದ್‌ ಕೇಜ್ರಿವಾಲ್‌ ಗೆ ಮತ್ತೊಂದು ಸಂಕಷ್ಟ: ಖಲಿಸ್ತಾನ ಲಿಂಕ್‌ ಕುರಿತು ಎನ್‌ಐಎ ತನಿಖೆಗೆ ಶಿಫಾರಸು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ನಿಷೇಧಿತ ಖಲಿಸ್ತಾನಿ ಉಗ್ರ ಸಂಘಟನೆ ‘ಸಿಖ್ಸ್‌ ಫಾರ್‌ ಜಸ್ಟಿಸ್‌’ನಿಂದ ರಾಜಕೀಯ ದೇಣಿಗೆ ಪಡೆದ ಪ್ರಕರಣವನ್ನು ಎನ್‌ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ ಅವರು ಶಿಫಾರಸು ಮಾಡಿದ್ದಾರೆ.

1993ರ ದೆಹಲಿ ಬಾಂಬ್‌ ಸ್ಫೋಟದ ಅಪರಾಧಿ, ಖಲಿಸ್ತಾನಿ ಉಗ್ರ ದೇವಿಂದರ್‌ ಪಾಲ್‌ ಭುಲ್ಲರ್‌ನನ್ನು ಜೈಲಿನಿಂದ ಬಿಡುಗಡೆಗೊಳಿಸುವುದಾಗಿ ತಿಳಿಸಿ ಆಮ್‌ ಆದ್ಮಿ ಪಕ್ಷವು ಸಿಖ್ಸ್‌ ಫಾರ್‌ ಜಸ್ಟಿಸ್‌ ಸಂಘಟನೆಯಿಂದ ಸುಮಾರು 133 ಕೋಟಿ ರೂ. (16 ದಶಲಕ್ಷ ಡಾಲರ್)‌ ದೇಣಿಗೆ ಪಡೆದಿದೆ ಎಂಬ ಕುರಿತು ದೂರು ನೀಡಿದ ಹಿನ್ನೆಲೆಯಲ್ಲಿ ವಿ.ಕೆ.ಸಕ್ಸೇನಾ ಅವರು ಎನ್‌ಐಎ ತನಿಖೆಗೆ ಶಿಫಾರಸು ಮಾಡಿದ್ದಾರೆ .

ಸಿಖ್ಸ್‌ ಫಾರ್‌ ಜಸ್ಟಿಸ್‌ ಉಗ್ರ ಸಂಘಟನೆಯು ವಾಂಟೆಡ್‌ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಸ್ಥಾಪಿಸಿದ್ದಾನೆ. ಇದನ್ನು ಕೇಂದ್ರ ಸರ್ಕಾರವು ನಿಷೇಧಿಸಿದೆ. ಈ ಸಂಘಟನೆಯಿಂದ ಆಮ್‌ ಆದ್ಮಿ ಪಕ್ಷವು ನೂರಾರು ಕೋಟಿ ರೂ. ದೇಣಿಗೆ ಪಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈಗ ಇದರ ಕುರಿತು ಎನ್‌ಐಎ ತನಿಖೆಗೆ ವಿ.ಕೆ.ಸಕ್ಸೇನಾ ಅವರು ಶಿಫಾರಸು ಮಾಡಿದ್ದಾರೆ.

ದೆಹಲಿ ಅಬಕಾರಿ ನೀತಿ ಜಾರಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದ್ದು, ತಿಹಾರ ಜೈಲಿನಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!