ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾದ ಎಫ್‌ಐಆರ್ ಆಧರಿಸಿ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಇಡಿ ಸಂಸ್ಥೆಯಿಂದಲೂ ಜಾರಿ ಪ್ರಕರಣದ ಮಾಹಿತಿ ವರದಿ (ಇಸಿಐಆರ್) ದಾಖಲಿಸಿಕೊಂಡಿದೆ.
ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯದ (ಇಡಿ) ಕೇಸಿನಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿ ನಂಬರ್ 1 (ಎ1 ಆರೋಪಿ) ಆಗಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಅವರ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ವಿರುದ್ಧವೂ ಇಸಿಐಆರ್‌ನಲ್ಲಿ ಆರೋಪಿಗಳೆಂದು ಉಲ್ಲೇಖ ಮಾಡಲಾಗಿದೆ.
ಇಸಿಐಆರ್ ಪೊಲೀಸ್ ಎಫ್ಐಆರ್ ಸಮನಾಗಿರುತ್ತದೆ.