ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ಕೊಲೆ ಆರೋಪದಡಿ ಎಫ್ಐಆರ್ ದಾಖಲಾಗಿದೆ.
ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ತೆರಳಿರುವಂತ ಸಂತ್ರಸ್ತರೊಬ್ಬರು ಶಾಸಕ ಮುನಿರತ್ನ ನಾಯ್ಡು ವಿರುದ್ಧ ಕೊಲೆ ಆರೋಪದಡಿ ದೂರು ನೀಡಿದ್ದರು. ಈ ದೂರು ಆಧರಿಸಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಂದಹಾಗೇ ಶಾಸಕ ಮುನಿರತ್ನ ವಿರುದ್ಧ ನೀಡಿರುವಂತ ದೂರಿನಲ್ಲಿ ಕೊಲೆ ಯತ್ನ ಹಾಗೂ ಸುಫಾರಿ ಕೊಟ್ಟು ಕೊಲೆಗೆ ಪ್ರಯತ್ನಿಸಿರುವ ಆರೋಪ ಮಾಡಲಾಗಿದೆ. ಹೀಗಾಗಿಯೇ ಅವರ ವಿರುದ್ಧ ಕೊಲೆ ಆರೋಪದಡಿ ಎಫ್ಐಆರ್ ಅನ್ನು ಪೊಲೀಸರು ದಾಖಲಿಸಿದ್ದಾರೆ.