ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಲಂಚ ಬೇಡಿಕೆ, ಬೆದರಿಕೆ ಹಾಕಿ ಹಣ ವಸೂಲಿ ಪ್ರಕರಣದಲ್ಲಿ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಸ್ಪೀಕರ್ ಯು.ಟಿ.ಖಾದರ್ಗೆ ಎಸ್ಐಟಿ ತಂಡ ಇಂದು ಮನವಿ ಸಲ್ಲಿಸಲಾಗಿದೆ.
ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಮುನಿರತ್ನ ಕಸ ವಿಲೇವಾರಿ ಗುತ್ತಿಗೆ ನೀಡಲು 30 ಲಕ್ಷ ರೂ. ಲಂಚಕ್ಕೆ ಬೇಡಿಕೆ ಆರೋಪ ಕೇಳಿಬಂದಿತ್ತು. ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ತನಿಖೆ ನಡೆಸಬೇಕಿದೆ. ಹೀಗಾಗಿ ಸ್ಪೀಕರ್ ಯು.ಟಿ.ಖಾದರ್ಗೆ ಎಸ್ಐಟಿ ಅನುಮತಿ ಕೋರಿದೆ. ಈ ಮನವಿಗೆ ಸ್ಪಂದಿಸಿ ಸ್ಪೀಕರ್ ಯು.ಟಿ.ಖಾದರ್ ಅನುಮತಿ ನೀಡಿದರೆ, ಮುನಿರತ್ನ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಪ್ರಯೋಗಿಸಲಾಗುತ್ತದೆ.
ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜುಗೆ ನಿಂದಿಸಿ ಬೆದರಿಕೆ ಹಿನ್ನೆಲೆ ವೈಯಾಲಿಕಾವಲ್ ಠಾಣೆಯಲ್ಲಿ ಜೀವ ಬೆದರಿಕೆಯಡಿ ಎಫ್ಐಆರ್ ದಾಖಲಾಗಿತ್ತು. ಕಸ ಸಾಗಾಣಿಕೆ ಗುತ್ತಿಗೆ ನೀಡಲು 30 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಈಗಾಗಲೇ 10 ಲಕ್ಷ ರೂ. ಹಣವನ್ನು ಕೊಟ್ಟಿದ್ದಾಗಿ ಆರೋಪಿಸಿದ್ದರು. ಚುನಾಯಿತ ಪ್ರತಿನಿಧಿಯಾಗಿರುವ ಶಾಸಕರಿಂದ ಅಧಿಕಾರ ದುರ್ಬಳಕೆ ಮಾಡಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ತನಿಖೆಗೆ ಅನುಮತಿ ಕೇಳಲಾಗಿದೆ.