March 15, 2026
Sunday, March 15, 2026
spot_img

ಬಿಎಂಟಿಸಿಗೆ ಮತ್ತೊಂದು ಬ*ಲಿ! ಕ್ಷಣದಲ್ಲೇ ಮೃತಪಟ್ಟ ಮಣಿಪುರದ ಯುವತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ಬಿಎಂಟಿಸಿ ಬಸ್‌ ಅಜಾಗರೂಕತೆಗೆ ಮತ್ತೊಂದು ಜೀವ ಬಲಿಯಾಗಿದೆ.

ಸಿಲ್ಕ್‌ ಬೋರ್ಡ್‌ನಿಂದ ಟಿನ್‌ ಫ್ಯಾಕ್ಟರಿಗೆ ಹೋಗುತ್ತಿದ್ದ ಇವಿ ಬಸ್‌, ಕೆ.ಆರ್ ಪುರಂನ ರೈಲ್ವೆ ನಿಲ್ದಾಣದ ಬಳಿ ಬಂದಾಗ, ಬೈಕ್ ನ ಹಿಂಭಾಗದಲ್ಲಿ ಕುಳಿತು ಹನ್ನಾ ಇನಕಾ ಬೈಕ್ ಇವಿ ಬಸ್ ಮುಂದೆ ಬಂದಿದೆ. ಆಗ ಬಸ್ ನ ಮುಂಭಾಗಕ್ಕೆ ಟಚ್ ಆಗಿ ಬೈಕ್ ಬ್ಯಾಲೆನ್ಸ್ ತಪ್ಪಿ ಕೆಳಗೆ ಬಿದ್ದಿದೆ. ಈ ವೇಳೆ ಹಿಂಭಾಗದಲ್ಲಿ ಕುಳಿತ ಯುವತಿ ಬಸ್ ಮುಂಭಾಗದ ಚಕ್ರಕ್ಕೆ ಬಿದ್ದಿದ್ದಾಳೆ. ಆಗ ಯುವತಿಯ ತಲೆ ಮೇಲೆ ಬಿಎಂಟಿಸಿ ಬಸ್ ಹತ್ತಿಸಿದೆ.

ಮೃತರನ್ನು 20 ವರ್ಷದ ಇನಕಾ ಎಂದು ಗುರುತಿಸಲಾಗಿದೆ. ಈಕೆ ಮಣಿಪುರದಿಂದ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದಳು. ಅಪಘಾತದ ಬಳಿಕ ತಕ್ಷಣವೇ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟೊತ್ತಿಗಾಗಲೇ ಯುವತಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !