ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಎಂಟಿಸಿ ಬಸ್‌ಗೆ ಸಿಲುಕಿ 21 ವರ್ಷದ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಹರಿಶ್ಚಂದ್ರ ಘಾಟ್ ಬಳಿ ಅಪಘಾತ ಸಂಭವಿಸಿದ್ದು, ಕ್ರಾಸಿಂಗ್ ವೇಳೆ ಬಸ್‌ನಡಿಗೆ ವಿದ್ಯಾರ್ಥಿನಿ ಕುಸುಮಿತಾ ಸಿಕ್ಕಿದ್ದಾಳೆ ಎಂದು ಹೇಳಲಾಗಿದೆ.
ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕುಸುಮಿತಾ, ಪ್ರತಿದಿನದಂತೆ ಕಾಲೇಜಿಗೆ ತೆರಳುತ್ತಿದ್ದ ವೇಳೆ ಅನಾಹುತ ಸಂಭವಿಸಿದೆ. ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.