August 31, 2026
Monday, August 31, 2026
spot_img

ಸಾಲದ ಸುಳಿಗೆ ಮತ್ತೊಂದು ಬಲಿ: ವಿಷ ಸೇವಿಸಿ ಆತ್ಮ*ಹತ್ಯೆಗೆ ಶರಣಾದ ರೈತ

ಹೊಸದಿಗಂತ ವರದಿ ದಾವಣಗೆರೆ

ದಾವಣಗೆರೆ- ಸಾಲಬಾಧೆಯಿಂದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕು ಮಲ್ಲನಾಯಕನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ಗ್ರಾಮದ ರವಿಕುಮಾರ್(50 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ರೈತ. ಸುಮಾರು ಎರಡು ಎಕರೆ ಜಮೀನು ಹೊಂದಿರುವ ಇವರ ಕುಟುಂಬ ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿತ್ತು. ಕುಟುಂಬದ ನಿರ್ವಹಣೆ ಹಾಗೂ ಮಕ್ಕಳ ಓದಿಗಾಗಿ ಅನೇಕ ಸಹಕಾರ ಸಂಘ ಹಾಗೂ ಪರಿಚಯಸ್ಥರಿಂದ ಕೈಗಡವಾಗಿ ಒಟ್ಟು 25 ಲಕ್ಷ ರೂ.ಗಳಿಗೂ ಅಧಿಕ ಸಾಲ ಮಾಡಿಕೊಂಡಿದ್ದರು. ಸರಿಯಾಗಿ ಮಳೆಯಾಗದ ಕಾರಣ ಮತ್ತು ಭದ್ರಾ ನಾಲೆಯಲ್ಲೂ ನೀರು ಬಿಡದ ಹಿನ್ನೆಲೆಯಲ್ಲಿ ರವಿಕುಮಾರ್ ತೀವ್ರ ಆತಂಕಕ್ಕೆ ಒಳಗಾಗಿದ್ದರು.

ಇದನ್ನೂ ಓದಿ:

ಬೆಳೆ ಕೈಕೊಟ್ಟರೆ ಇಷ್ಟೊಂದು ದೊಡ್ಡ ಮೊತ್ತದ ಸಾಲವನ್ನು ತೀರಿಸುವುದು ಹೇಗೆ ಎಂಬ ಚಿಂತೆಯಲ್ಲಿದ್ದ ರವಿಕುಮಾರ್ ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !