ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲಾರ ಜಿಲ್ಲೆಯಲ್ಲಿ ಹೃದಯಾಘಾತದಿಂದ ಕೆ ಎಸ್ ಆರ್ ಟಿ ಸಿ ನೌಕರರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಮುತ್ತಕಪಲ್ಲಿ ಗ್ರಾಮದ ನಿವಾಸಿ ಬಾಬಾಜಾನ್(53) ಎಂಬ ಕೆ ಎಸ್ ಆರ್ ಟಿ ಸಿ ನೌಕರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಬಾಬಾಜಾನ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಚಾಲಕರಾಗಿ ಕೆಲಸಕ್ಕೆ ಸೇರಿದ್ದ ಬಾಬಾಜಾನ್ ಅವರು ಅಪಘಾತದಲ್ಲಿ ಕಾಲಿಗೆ ಪೆಟ್ಟಾದ ನಂತ್ರ ಘಟಕದಲ್ಲೇ ಕೆಲಸ ಮಾಡಿಕೊಂಡಿದ್ದರು.ಭಾನುವಾರದಂದು ಕೂಡ ಕರ್ತವ್ಯಕ್ಕೆ ಹಾಜರಾಗಿದ್ದ ಬಾಬಾಜಾನ್, ಮನೆಗೆ ತೆರಳಿದ ನಂತ್ರ ಸೋಮವಾರದಂದು ರಾತ್ರಿ ಹೃದಯಾಘಾತವಾಗಿದೆ.