ಹೊಸದಿಗಂತ ವರದಿ, ಚಿಕ್ಕಮಗಳೂರು:
ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ವೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ನಗರದ ಬೇಲೂರು ರಸ್ತೆಯಲ್ಲಿರುವ ಬೈಕ್ ಶೋ ರೂಂ ಬಳಿ ಈ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ ಹಿರೇಗೌಜ ತಾಲ್ಲೂಕಿನ ಶಿವಮೂರ್ತಿ(೫೦) ಮೃತ ದುರ್ದೈವಿಯಾಗಿದ್ದಾರೆ. ಶೋ ರೂಂನ ಮುಂದೆ ಕರ್ತವ್ಯ ನಿರ್ವಹಿಸುವಾಗ ಅಸ್ವಸ್ಥರಾಗಿರುವ ಅವರು ಪಕ್ಕದಲ್ಲೇ ಇದ್ದ ಕಟ್ಟೆಯೊಂದರ ಮೇಲೆ ಕುಳಿತು ತಕ್ಷಣ ಕುಸಿದು ಬೀಳುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಕ್ಕ ಪಕ್ಕದವರು ಬಂದು ನೋಡುವಷ್ಟರಲ್ಲಿ ಅವರು ಜೀವ ಕಳೆದುಕೊಂಡಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವಾಗಾರಕ್ಕೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಭೇಟಿ ನೀಡಿ ಮೃತರ ಸಂಬಂಧಿಕರಿಗೆ ಸಾಂತ್ವನ ಹೇಳಿದ್ದಾರೆ.