ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರೆದಿದೆ. ಇಂದು ಮತ್ತೊಂದು ಜೀವ ಬಲಿಯಾಗಿದೆ. ಕೋಲಾರದಲ್ಲಿ ಸಾಲದ ಬಾಧೆ ತಾಳಲಾರದೇ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೋಲಾರ ತಾಲ್ಲೂಕಿನ ಚಿಟ್ನಹಳ್ಳಿ ಗ್ರಾಮದ ನಾಗರಾಜ್ ಎಂಬುವರು ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ.
10 ಲಕ್ಷ ಸಾಲವನ್ನು ಮಾಡಿದ್ದಂತ ನಾಗರಾಜ್ ಗೆ ಸಾಲ ಮರುಪಾವತಿಗೆ ಫೈನಾನ್ಸ್ ಕಂಪನಿಗಳು ಸೂಚಿಸಿದ್ದವು. ಈ ಸಾಲದ ಬಾಧೆಯನ್ನು ತಾಳಲಾರದೇ ಮನೆಯಲ್ಲೇ ನೇಣುಬಿಗಿದುಕೊಂಡು ನಾಗರಾಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ.