ಬಿಬಿಎಂಪಿ ಕಸದ ಲಾರಿಗೆ ಮತ್ತೊಬ್ಬ ಬಲಿ: ಡೆಲಿವರಿ ಬಾಯ್ ಮೇಲೆ ಹರಿದ ಲಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕಸದ ಲಾರಿ ಹರಿದು ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆ ಸುರಪುರ ಮೂಲದ ದೇವಣ್ಣ(25) ಮೃತಪಟ್ಟ ವ್ಯಕ್ತಿ.
ಥಣಿಸಂದ್ರ ರೈಲ್ವೆ ಮೇಲ್ಸೇತುವೆ ಸಮೀಪ ಘಟನೆ ನಡೆದಿದೆ. ಆರೋಪಿ ಚಾಲಕ ದಿನೇಶ ನಾಯ್ಕ್(40)ನನ್ನು ಬಂಧಿಸಲಾಗಿದೆ.
ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಒಂದು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಸದ ಲಾರಿಗೆ ನಾಲ್ವರು ಬಲಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!