‘ಜ್ಞಾನವಾಪಿ’ ಹಿಂದುಗಳಿಗೆ ಮತ್ತೆ ಜಯ: ಪೂಜೆಗೆ ತಡೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾರಾಣಸಿ ಜ್ಞಾನವಾಪಿ ಆವರಣದ ದಕ್ಷಿಣದ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ಅನುಮತಿ ನೀಡಿದ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಹಿಂದುಗಳಿಗೆ ಮತ್ತೆ ಜಯ ಸಿಕ್ಕಿದೆ.

ವಾರಣಾಸಿ ಜಿಲ್ಲಾ ನ್ಯಾಯಾಧೀಶರು ನೀಡಿದ್ದ ಆದೇಶದಂತೆ ಪೂಜೆ ಮುಂದುವರಿಸಲಾಗುತ್ತದೆ ಎಂದಿರುವ ಹೈಕೋರ್ಟ್, ಭಕ್ತರು ಪೂಜೆ ಸಲ್ಲಿಸಲು ಅಗತ್ಯ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಜೊತೆಗೆ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್‌ಗೆ ಅರ್ಚಕರನ್ನು ನಾಮನಿರ್ದೇಶನ ಮಾಡುವಂತೆ ಕೂಡಾ ಸೂಚಿಸಿದೆ.

ಮಸೀದಿಯನ್ನು ನಿರ್ವಹಿಸುವ ಸಂಸ್ಥೆಯಾದ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಸಲ್ಲಿಸಿದ ಮೇಲ್ಮನವಿಗೆ ಸಂಬಂಧಿಸಿ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!