ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ವಿಶೇಷ ಸೌಲಭ್ಯ ಪಡೆಯುತ್ತಿದ್ದಾರೆ ಎನ್ನುವುದಕ್ಕೆ ಪುಷ್ಠಿ ನೀಡುವ ಹಲವು ವಿಡಿಯೋಗಳು ಈಗಾಗಲೇ ವೈರಲ್ ಆಗಿವೆ. ಇದಕ್ಕೆ ಸಂಬಂಧಪಟ್ಟ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ ಜೈಲಿನ ಕೊಠಡಿಯೊಳಗೆ ಭೇಟಿಯಾಗುತ್ತಿರುವ ವಿಡಿಯೋ ವೈರಲ್ ಆಗಿದೆ.
ಜೈಲಿನಲ್ಲಿ ಮಸಾಜ್ ಹಾಗೂ ಇತರೆ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ ಎನ್ನುವ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಈ ವಿಡಿಯೋಗಳು ರಾಜಕೀಯ ಎದುರಾಳಿಗಳ ಕೈ ಸಿಕ್ಕಿದ್ದು, ಸೆಲ್‌ನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸೋರಿಕೆ ಮಾಡುವುದನ್ನು ನಿಲ್ಲಿಸುವಂತೆ ದೆಹಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ನಾಯಕ ಜೈಲು ಅಧೀಕ್ಷಕರನ್ನು ಭೇಟಿ ಮಾಡಿದ ವಿಡಿಯೋವನ್ನು ಕೆಲ ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪ್ರಾಮಾಣಿಕ ಸಚಿವ ಜೈನ್ ಅವರ ಹೊಸ ವಿಡಿಯೋ ಇಲ್ಲಿದೆ. ರಾತ್ರಿ ಎಂಟು ಗಂಟೆಗೆ ಜೈಲು ಸೂಪರಿಂಟೆಂಡೆಂಟ್ ಸಚಿವರನ್ನು ಭೇಟಿ ಮಾಡುತ್ತಾರೆ ಎಂದು ದೆಹಲಿ ಬಿಜೆಪಿ ಮಾಧ್ಯಮ ಘಟಕದ ಮುಖ್ಯಸ್ಥ ಹರೀಶ್ ಖುರಾನಾ ಟ್ವೀಟ್ ಮಾಡಿ ವಿಡಿಯೋ ಹಂಚಿಕೊಂಡಿದ್ದಾರೆ.
#WATCH | More CCTV visuals of jailed Delhi Minister and AAP leader Satyendar Jain in Tihar jail come out: Sources pic.twitter.com/4c6YdJ2bAL
— ANI (@ANI) November 26, 2022
ಇಡಿ ದಾಖಲಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಸತ್ಯೇಂದ್ರ ಜೈನ್ ಜೈಲು ಸೇರಿದ್ದು, ಅವರಿಗೆ ವಿಶೇಷ ಸೌಲಭ್ಯ ನೀಡುತ್ತಿದ್ದ ಆರೋಪದ ಮೇಲೆ ತಿಹಾರ್ ಜೈಲು ಅಧೀಕ್ಷಕರನ್ನು ಅಮಾನತುಗೊಳಿಸಲಾಗಿತ್ತು.