ಕೊರೋನಾ ಭೀತಿಯ ನಡುವೆ ರಾಜ್ಯಕ್ಕೆ ಮತ್ತೊಂದು ವೈರಸ್ ಎಂಟ್ರಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ನಡುವೆ ಮತ್ತೊಂದು ವೈರಸ್ ಎಂಟ್ರಿ ಆಗಿದ್ದು, ಬಾಗಲಕೋಟೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ.

ಜಿಲ್ಲೆಯ ಇಳಕಲ್​ ತಾಲೂಕಿನ ಗೊರಬಾಳ ಗ್ರಾಮದಲ್ಲಿರುವ ಸಾಕಾಣಿಕೆ ಕೇಂದ್ರದಲ್ಲಿ ರೋಗ ಪತ್ತೆಯಾಗಿದೆ. ಅನ್ಯರಾಜ್ಯದಿಂದ ಹಂದಿಗಳನ್ನು ಆಮದು ಮಾಡಿಕೊಂಡಿರುವ ವೇಳೆ ಬಂದಿರುವ ಶಂಕೆ ವ್ಯಕ್ತವಾಗಿದೆ.

ಕಳೆದ ಮೇ 22ಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹಂದಿಗಳ ರಕ್ತದ ಮಾದರಿಯನ್ನು ಭೋಪಾಲ್​ನ ಲ್ಯಾಬೊರೇಟರಿಗೆ ಕಳುಹಿಸಿ ಪರೀಕ್ಷಿಸಲಾಗಿದೆ.

ಇಳಕಲ್​ ತಾಲೂಕಿನಲ್ಲಿ ಹಂದಿ ಸಾಗಾಣಿಕೆ ಮಾಡಿ, ಕೇರಳ, ತಮಿಳುನಾಡು ಹಾಗೂ ರಾಜ್ಯದ ಕೊಡಗು ಜಿಲ್ಲೆಗಳಿಗೆ ಕಳುಹಿಸಲಾಗುತ್ತದೆ. ಹಾಗಾಗಿ ಬಾಗಲಕೋಟೆ ಜಿಲ್ಲೆಗೆ ಈ ರೋಗ ಸೀಮಿತವಾಗಿಲ್ಲ. ಈಗಾಗಲೇ ಕೇಂದ್ರ ಸರ್ಕಾರ, ಕೇರಳ ಸೇರಿದಂತೆ ಇತರ ರಾಜ್ಯಗಳಲ್ಲಿ ಹಂದಿ ಜ್ವರ ಹರಡಿರುವ ಬಗ್ಗೆ ಮಾಹಿತಿ ನೀಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!