ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ ವುಡ್ (Sandalwood) ನಲ್ಲಿ ಮತ್ತೊಂದು ಮದುವೆ ಗೌಜಿ ಎದ್ದಿದೆ. ನಟಿ ಹರ್ಷಿಕಾ ಪೂಣಚ್ಚ (Harshika Poonacha) ಮತ್ತು ಭುವನ್ ಪೊನ್ನಣ್ಣ (Bhuvan Ponnanna) ಹಸೆಮಣೆ ಏರುತ್ತಿದ್ದಾರೆ. ತುಂಬಾ ವರ್ಷಗಳಿಂದ ಈ ಜೋಡಿ ಪ್ರೀತಿಸುತ್ತಿದ್ದು, ಇದೀಗಮದುವೆ ಆಮಂತ್ರಣ ನೀಡುವ ಮೂಲಕ ಸತಿಪತಿಯಾಗುತ್ತಿದ್ದಾರೆ.
ಕೊಡಗಿನ (Kodagu) ಇಗ್ಗುತ್ತಪ್ಪ ದೇವಾಲಯದಲ್ಲಿ ಲಗ್ನಪತ್ರಿಕೆ ಕಾರ್ಯ ಸರಳವಾಗಿ ನಡೆದಿದೆ. ಮದುವೆಯಲ್ಲಿ ಈ ಜೋಡಿಯ ಆತ್ಮೀಯರು, ಸಿನಿಮಾ ರಂಗದ ಗಣ್ಯರು ಭಾಗಿಯಾಗಲಿದ್ದಾರೆ.
ಕೊಡಗು ಭಾಷೆಯಲ್ಲೇ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲಾಗಿದೆ. ಕೊಡಗು ಸಂಪ್ರದಾಯದಂತೆಯೇ ಇಬ್ಬರೂ ಮದುವೆ ಆಗುತ್ತಿದ್ದು, ಮುಹೂರ್ತ ಕಾರ್ಯಗಳು ಬಹುತೇಕವಾಗಿ ಕೊಡಗಿನಲ್ಲೇ ನಡೆಯಲಿವೆ.
ಭುವನ್ ಮತ್ತು ಹರ್ಷಿಕಾ ಇಬ್ಬರೂ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರೂ ಒಟ್ಟಿಗೆ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ಭಾಗಿಯಾಗಿದ್ದರು.