Monday, November 28, 2022

Latest Posts

ಕೇಜ್ರಿವಾಲ್ ಸರ್ಕಾರದ ಮತ್ತೊಂದು ವಿಕೆಟ್ ಪತನ: ವಿವಾದ ಸೃಷ್ಟಿಸಿದ ಸಚಿವ ರಾಜೇಂದ್ರ ಪಾಲ್ ಗೌತಮ್ ರಾಜೀನಾಮೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅರವಿಂದ್​ ಕೇಜ್ರಿವಾಲ್​ ನೇತೃತ್ವದ ದೆಹಲಿ ಸರ್ಕಾರದಿಂದ ಮತ್ತೊಂದು ವಿಕೆಟ್ ಪತನಗೊಂಡಿದ್ದು, ಸಚಿವ ರಾಜೇಂದ್ರ ಪಾಲ್‌ ಗೌತಮ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಧಾರ್ಮಿಕ ಮತಾಂತರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಗೌತಮ್‌ ವಿವಾದಕ್ಕೆ ಸಿಲುಕಿದ್ದರು. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಸಮಾಜ ಕಲ್ಯಾಣ ಸಚಿವರಾಗಿದ್ದ ರಾಜೇಂದ್ರ ಪಾಲ್‌ ಗೌತಮ್‌ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇಲ್ಲಿ ನೂರಾರು ಮಂದಿ ಹಿಂದೂ ದೇವರುಗಳನ್ನು ಬಹಿಷ್ಕರಿಸುವ ಪ್ರಮಾಣವಚನ ಸ್ವೀಕರಿಸಿದ್ದರು. ಇದರ ವಿಡಿಯೋ ವೈರಲ್‌ ಆಗಿ ರಾಜಕೀಯ ವಿವಾದ ಭುಗಿಲೆದ್ದಿತ್ತು. ಅಲ್ಲದೇ, ಮುಖ್ಯಮಂತ್ರಿ ಕೇಜ್ರಿವಾಲ್​ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿತ್ತು.

ಇತ್ತ ಈ ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವ ರಾಜೇಂದ್ರ ಪಾಲ್‌ ಗೌತಮ್‌ ವಿರುದ್ಧ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!