April 15, 2026
Wednesday, April 15, 2026
spot_img

ಚಿಕ್ಕಮಗಳೂರಿನಲ್ಲಿ ಮತ್ತೆ ಕಾಡಾನೆ ದಾಳಿ, ಕಾಫಿ ತೋಟದ ಕಾರ್ಮಿಕನ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿಕ್ಕಮಗಳೂರಿನಲ್ಲಿ ಮತ್ತೆ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ.

ಚಿಕ್ಕಮಗಳೂರಿನ ಪುರ ಗ್ರಾಮದಲ್ಲಿ ತೋಟದೊಳಗೆ ನಡೆದುಕೊಂಡು ಹೋಗುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿ ಕೊಂದಿದೆ. ಹಾವೇರಿಯ ಹಾನಗಲ್‌ ಸಮೀಪದ ತಿರುವಳ್ಳಿಯ ಯಲ್ಲಪ್ಪ ಮೃತ ದುರ್ದೈವಿ. ನಾಗೇಶ್‌ ಗೌಡ ಎನ್ನುವವರ ತೋಟದ ಬಳಿ ಯಲ್ಲಪ್ಪ ನಡೆದುಕೊಂಡು ಹೋಗುತ್ತಿದ್ದಾರೆ. ಈ ವೇಳೆ ಆನೆ ಅವರ ಮೇಲೆ ದಾಳಿ ಮಾಡಿ ಸಾಯಿಸಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅವರ ಮೃತದೇಹವನ್ನು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !