ಹೊಸದಿಗಂತ ಡಿಜಿಟಲ್ ಡೆಸ್ಕ್ :
IPL 2023 ಟೂರ್ನಿಯಲ್ಲಿ ಈಗಾಗಲೇ ಗೆಲುವಿನ ಶುಭಾರಂಭ ಮಾಡಿದ ಗುಜರಾತ್ ಟೈಟಾನ್ಸ್ ಇಂದು ಡೆಲ್ಲಿ ವಿರುದ್ಧ ಆಡಲಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಗುಜರಾತ್ ಟೈಟಾನ್ಸ್ ತಂಡದಲ್ಲಿ 2 ಮಹತ್ವದ ಬದಲಾವಣೆ ಮಾಡಲಾಗಿದೆ. ಗಾಯಗೊಂಡಿರುವ ಕೇನ್ ವಿಲಿಯಮ್ಸನ್ ಬದಲು ಡೇವಿಡ್ ಮಿಲ್ಲರ್ ತಂಡ ಸೇರಿಕೊಂಡಿದ್ದಾರೆ. ಇನ್ನು ವಿಜಯ್ ಶಂಕರ್ ಬದಲು ಸಾಯಿ ಸುದರ್ಶನ್ ತಂಡ ಸೇರಿಕೊಂಡಿದ್ದಾರೆ.
ಇತ್ತ ಡೆಲ್ಲಿ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. 20 ವರ್ಷದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಅಭಿಷೇಕ್ ಪೊರೆಲ್ ಪದಾರ್ಪಣೆ ಮಾಡಿದ್ದಾರೆ. ಅನ್ರಿಚ್ ನೋರ್ಜೆ ಡೆಲ್ಲಿ ತಂಡ ಸೇರಿಕೊಂಡಿದ್ದಾರೆ. ಇತ್ತ ರೊವ್ಮೆನ್ ಪೊವೆಲ್ ತಂಡದಿಂದ ಹೊರಬಿದ್ದಿದ್ದಾರೆ.
ಗುಜರಾತ್ ಟೈಟಾನ್ಸ್
ವೃದ್ಧಿಮಾನ್ ಸಾಹ, ಶುಭಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ಟಿವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಜೋಶುವಾ ಲಿಟಲ್, ಯಶ್ ದಯಾಳ್, ಅಲ್ಜಾರಿ ಜೆಸೋಫ್
ಡೆಲ್ಲಿ ಕ್ಯಾಪಿಟಲ್ಸ್
ಪೃಥ್ವಿ ಶಾ, ಡೇವಿಡ್ ವಾರ್ನರ್(ನಾಯಕ), ಮಿಚೆಲ್ ಮಾರ್ಶ್, ರಿಲೆ ರೊಸೊ, ಸರ್ಫರಾಜ್ ಖಾನ್, ಅಕ್ಸರ್ ಪಟೇಲ್, ಅಭಿಷೇಕ್ ಪೊರೆಲ್, ಕುಲ್ದೀಪ್ ಯಾದವ್, ಚೇತನ್ ಸಕಾರಿಯಾ, ಖಲೀಲ್ ಅಹಮ್ಮದ್, ಅನ್ರಿಚ್ ನೋರ್ಜೆ