ಮತ್ತೊಂದು ಗೆಲುವಿನ ಲೆಕ್ಕಾಚಾರ: ಡೆಲ್ಲಿ ವಿರುದ್ಧ ಟಾಸ್ ಗೆದ್ದ ಲಖನೌ ಬ್ಯಾಟಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಐಪಿಎಲ್ ನಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆತಿಥೇಯ ಲಖನೌ ತಂಡದ ನಾಯಕ ಕೆ ಎಲ್ ರಾಹುಲ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಲಖನೌ ಸೂಪರ್ ಜೈಂಟ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಮಯಾಂಕ್ ಯಾದವ್ ಬದಲಿಗೆ ಆರ್ಶದ್ ಖಾನ್ ತಂಡ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಮುಕೇಶ್ ಕುಮಾರ್ ಹಾಗೂ ಕುಲ್ದೀಪ್ ಯಾದವ್ ತಂಡ ಕೂಡಿಕೊಂಡಿದ್ದಾರೆ.

ಆಡಿರುವ 5 ಪಂದ್ಯಗಳಲ್ಲಿ 4ರಲ್ಲಿ ಸೋತಿರುವ ಡೆಲ್ಲಿ ಈ ಪಂದ್ಯದಲ್ಲಿ ಸುಧಾರಿತ ಪ್ರದರ್ಶನ ತೋರಬೇಕಿದೆ. ಮತ್ತೊಂದೆಡೆ ಲಖನೌ ಆರಂಭಿಕ ಸೋಲಿನ ಬಳಿಕ ಸತತ 3 ಪಂದ್ಯಗಳನ್ನು ಗೆದ್ದಿದ್ದು, ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!