ವರುಣಾರ್ಭಟಕ್ಕೆ ಉತ್ತರ ತತ್ತರ: ಮೂವರು ಸಾವು, ಪ್ರವಾಹದಲ್ಲಿ ಸಿಕ್ಕಿಹಾಕಿಕೊಂಡಿವೆ 55 ಲಾರಿಗಳು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂವರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಬಂಗಾಳಕೊಲ್ಲಿಯಲ್ಲಿ ಚಂಡಮಾರುತದಿಂದಾಗಿ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ವಿಜಯನಗರ ಜಿಲ್ಲೆಯಲ್ಲಿಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ನಾರಪ್ಪ ಬಣಕಾರ (55) ಮತ್ತು ಪ್ರಶಾಂತ್ ಬಣಕಾರ (45) ಮೃತರು. ಇಬ್ಬರೂ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಾಸನಪುರ ಗ್ರಾಮದವರಾಗಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಕುಳಗಟ್ಟೆ ಬಸವರಾಜಪ್ಪ (81) ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅವರ ಮಗ ಮತ್ತು ಸೊಸೆ ಕೂಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ.

ಅವಿಭಜಿತ ಬಳ್ಳಾರಿ ಜಿಲ್ಲೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಕೆಲವೇ ಗಂಟೆಗಳಲ್ಲಿ 130 ಮಿ.ಮೀ ಮಳೆ ಸುರಿದಿದ್ದು, ತೀವ್ರ ಪ್ರವಾಹ ಉಂಟಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲೂ ಭಾರಿ ಮಳೆಯಾಗಿದೆ. 150 ಕ್ಕು ಹೆಚ್ಚು ಮನೆಗಳು ಜಲಾವೃತವಾಗಿವೆ.

ಸಂಡೂರಿನ ಗಣಿಗಾರಿಕೆ ಪ್ರದೇಶದಲ್ಲಿ 55ಕ್ಕೂ ಹೆಚ್ಚು ಗಣಿಗಾರಿಕೆ ಟ್ರಕ್‌ಗಳು ಪ್ರವಾಹದಲ್ಲಿ ಸಿಲುಕಿಕೊಂಡಿವೆ. ವಾಹನದೊಳಗೆ ಸಿಲುಕಿಕೊಂಡಿದ್ದ ಸುಮಾರು 25 ಟ್ರಕ್ ಚಾಲಕರನ್ನು ಸ್ಥಳೀಯರು ರಕ್ಷಿಸಿದ್ದಾರೆ. 9,000 ಹೆಕ್ಟೇರ್‌ನಲ್ಲಿ ಭತ್ತ, ಬಾಳೆ, ಮೆಣಸಿನಕಾಯಿ ಬೆಳೆಗಳು ಕೊಚ್ಚಿ ಹೋಗಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!