ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ. ಡಿಸೆಂಬರ್ 23 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗುವುದು.
ಅಮಿತ್ ಶಾ, ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಅಭಿಯಾನವನ್ನು ನಡೆಸುವುದಾಗಿ ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರ ಸಂಕ್ಷಿಪ್ತ ರೂಪ) ಸಂಘಟನೆಯು ಗುರುವಾರ ಹೇಳಿದೆ. ಸಂವಿಧಾನಕ್ಕೆ ವಿರುದ್ಧವಾಗಿರುವ ಆರ್‌ಎಸ್‌ಎಸ್ ವಿರುದ್ಧ ನಾವು ಅಭಿಪ್ರಾಯ ಸಂಗ್ರಹಿಸುತ್ತೇವೆ. ಸಂಘಟನೆಯನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಅಹಿಂದ ‘ಚಳುವಳಿ’ ಕಾರ್ಯದರ್ಶಿ ಆರ್ ಸುರೇಂದ್ರ ಹೇಳಿದರು. ಅಮಿತ್ ಶಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ದಲಿತರ ಜತೆಗೆ ಹಿಂದುಳಿದ ವರ್ಗದವರೂ ಸೇರಿ ಅವರ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಡಿಎಸ್‌ಎಸ್ ಹಿರಿಯ ಮುಖಂಡ ಮಾವಳ್ಳಿ ಶಂಕರ್ ಹೇಳಿದ್ದಾರೆ.