ಜೆಎನ್‌ಯುನಲ್ಲಿ ಬ್ರಾಹ್ಮಣ ವಿರೋಧಿ ಬರಹ: ತನಿಖೆಗೆ ಆದೇಶಿಸಿದ ವಿವಿ ಕುಲಪತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೆಹಲಿಯ ಜವಾಹರ ಲಾಲ್‌ ನೆಹರು ವಿಶ್ವವಿದ್ಯಾಲಯದ ಗೋಡೆಗಳ ಮೇಲೆ ಬ್ರಾಹ್ಮಣ ವಿರೋಧಿ ಘೋಷಣೆ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ಆಕ್ರೋಶಕ್ಕೆ ವ್ಯಕ್ತವಾದ ಬೆನ್ನಲ್ಲೇ ವಿವಿ ಕುಲಪತಿಯವರು ಘಟನೆ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕುಂದುಕೊರತೆ ಸಮಿತಿಗೆ ಆದೇಶಿಸಿದ್ದಾರೆ.

ಘಟನೆಯನ್ನು ಜೆಎನ್‌ಯು ಕುಲಪತಿ ಸಂತಿಶ್ರೀ ಡಿ ಪಂಡಿತ್‌ ಅವರು ಖಂಡಿಸಿದ್ದಾರೆ.ಶೀಘ್ರವೇ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕುಂದುಕೊರತೆ ಸಮಿತಿಯ ಡೀನ್‌ ಅವರಿಗೆ ಆದೇಶಿಸಿದ್ದಾರೆ ಎಂದು ವಿವಿ ಪ್ರಕಟಣೆ ತಿಳಿಸಿದೆ.

‘ಬ್ರಾಹ್ಮಣರೇ ವಿವಿ ಬಿಟ್ಟು ತೊಲಗಿ, ನಿಮ್ಮ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇವೆ’ ಎಂಬುದು ಸೇರಿ ಹಲವು ಘೋಷಣೆಗಳನ್ನು ಗೋಡೆಗಳ ಮೇಲೆ ಬರೆಯಲಾಗಿತ್ತು. ಇದರ ವಿರುದ್ಧ ಎಬಿವಿಪಿ ಆಕ್ರೋಶ ವ್ಯಕ್ತಪಡಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!