ಕಾಂಗ್ರೆಸ್ ಸರ್ಕಾರದ ಮೃದು ಧೋರಣೆಯಿಂದ ಹಿಂದೂ ವಿರೋಧಿ ಕೃತ್ಯ ನಡೆಯುತ್ತಿವೆ: ಜೋಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಹಿಂದೂ ವಿರೋಧಿ ಹಾಗೂ ರಾಷ್ಟ್ರ ವಿರೋಧಿ ಚಳವಳಿ ತೀವ್ರವಾಗಿದ್ದು, ಇದಕ್ಕೆಲ್ಲ ಕಾಂಗ್ರೆಸ್ ನೇರ ಹೊಣೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಇಂತಹ ಹಿಂದೂ ವಿರೋಧಿ ಕೃತ್ಯಗಳು ಏಕೆ ನಡೆಯುತ್ತಿವೆ. ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರದ ಮೃದು ಧೋರಣೆಯೇ ಕಾರಣ ಎಂದರು.

ಈ ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದರು. ಎಫ್‌ಎಸ್‌ಎಲ್ ವರದಿ ಬಂದರೂ ಕ್ರಮ ಕೈಗೊಂಡಿಲ್ಲ. ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಫೋಟ ನಡೆದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈಗ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ದಾಳಿ ನಡೆದಿದೆ ಎಂದರೆ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!