ಹೊಸದಿಗಂತ ವರದಿ,ಮಂಡ್ಯ :
ಮಂಡ್ಯದಲ್ಲಿ ಚುನಾಯಿತ ಪ್ರತಿನಿಧಿಗಳು ಹಿಂದು ವಿರೋಧಿ ಧೋರಣೆ ತಾಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಕೋಮು ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದರು.
ನಗರದ ಬಿಜೆಪಿ ವಿಕಾಸ ಭವನದಲ್ಲಿ ನಡೆದ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷ ಹನುಮಧ್ವಜಕ್ಕೆ ಅಗೌರವ ತಂದಿದ್ದಾರೆ. ಮತ್ತೆ ಗಣೇಶ ಉತ್ಸವದ ಮೇಲೆ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್‌ಗಳನ್ನು ಎಸೆದಿದ್ದಾರೆ. ಸರ್ಕಾರವೇ ಮುಸ್ಲೀಂ ಭಯೋತ್ಪಾದಕರಿಗೆ ಕುಮ್ಮಕ್ಕು ಕೊಡುತ್ತಿದೆ. ಇನ್ನು ಮೂವತ್ತು ವರ್ಷದಲ್ಲಿ ಭಾರತವನ್ನು ಪಾಕಿಸ್ತಾನವನ್ನು ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಇದನ್ನು ಮಾಡುವ ನಿಟ್ಟಿನಲ್ಲಿ ಈ ಎಲ್ಲ ಭಯೋತ್ಪಾದಕ ಕೃತ್ಯಗಳು ನಡೆಯುತ್ತಿವೆ ಎಂದು ಕಿಡಿಕಾರಿದರು.