ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಕ್ಯಾಲಿಫೋರ್ನಿಯಾದ ನೆವಾರ್ಕ್‌ನ ಹಿಂದೂ ದೇಗುಲದ ಗೋಡೆ ಮೇಲೆ ಭಾರತ ವಿರೋಧಿ ಬರಹಗಳನ್ನು ಬರೆಯಲಾಗಿದೆ.
ಸ್ವಾಮಿನಾರಾಯಣ ದೇಗುಲದ ಗೋಡೆ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆದು ವಿರೂಪಗೊಳಿಸಲಾಗಿದೆ. ಇದರಿಂದಾಗಿ ಭಾರತೀಯ ಸಮುದಾಯದ ಭಾವನೆಗಳಿಗೆ ನೋವಾಗಿದೆ. ಈ ಘಟನೆಯನ್ನು ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ರಾಯಭಾರ ಕಚೇರಿ ಖಂಡಿಸಿದೆ.
ಇದು ಖಲಿಸ್ತಾನ್ ಪರ ಕಾರ್ಯಕರ್ತರು ಎಸಗಿರುವ ಕೃತ್ಯ ಎಂದು ಶಂಕಿಸಲಾಗಿದ್ದು, ಈ ಬಗ್ಗೆ ತನಿಖೆ ಆರಂಭವಾಗಿದೆ.