ನೌಶೇರಾದಲ್ಲಿ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆ, ಇಬ್ಬರು ಭಯೋತ್ಪಾದಕರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೇರಾ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನದ ಕಡೆಯಿಂದ ಒಳನುಸುಳುವ ಯತ್ನವನ್ನು ವಿಫಲಗೊಳಿಸಿರುವ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಉಗ್ರರ ವಿರುದ್ಧದ ಕಾರ್ಯಾಚರಣೆ ಕುರಿತು ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ಘಟಕ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದು, ‘ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯ ಭಾಗವಾಗಿ ಭಾನುವಾರ ಮಧ್ಯರಾತ್ರಿ ನೌಶೇರಾ ವಲಯದ ಲ್ಯಾಮ್‌ನ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ತಿಳಿಸಿದೆ.

ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!