ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಯೋಗಗುರು ಬಾಬಾ ರಾಮ್ ದೇವ್ ವಿರುದ್ಧ ದೂರು ದಾಖಲಾಗಿದೆ.
ಬಿಹಾರ ಮೂಲದ ಹಕ್ಕುಗಳ ಕಾರ್ಯಕರ್ತ ತಮನ್ನಾ ಹಶ್ಮಿ ಎಂಬುವವರು ಯೋಗ ಗುರು ರಾಮ್ ದೇವ್ ಅವರ ವಿರುದ್ಧ ದೂರು ದಾಖಲಿಸಿದ್ದು, ರಾಮ್ ದೇವ್ ಅವರು ತಮ್ಮ ಇತ್ತೀಚಿನ ಸಭೆಯಲ್ಲಿ ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ಮುಸ್ಲಿಮರ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಬಿಹಾರದ ಸ್ಥಳೀಯ ನ್ಯಾಯಾಲಯದಲ್ಲಿ ಹಶ್ಮಿ ಅವರು ರಾಮದೇವ್ ವಿರುದ್ಧ ದೂರು ದಾಖಲಿಸಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ.