ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದಿಂದ ಅಕ್ರಣ ಹಣ ಪಡೆದು ದೇಶ ವಿರೋಧಿ ಸುದ್ದಿ ಪ್ರಕಟಿಸುತ್ತಿದ್ದ ನ್ಯೂಸ್‌ಕ್ಲಿಕ್ ಸಂಸ್ಥೆ ಮೇಲೆ ದಾಳಿ ನಡೆಸಿದ್ದ ಪೊಲೀಸರು ಸಂಪೂರ್ಣ ಕಚೇರಿಗೆ ಬೀಗ ಜಡಿದಿದ್ದರು.
ಇದೇ ವೇಳೆ ನ್ಯೂಸ್ ಕ್ಲಿಕ್ ಸಂಸ್ಥಾಪಕ ಹಾಗೂ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಹಾಗೂ ಕಚೇರಿಯ ಹೆಚ್ಆರ್ ಅಮಿತ್ ಚಕ್ರವರ್ತಿ ಇಬ್ಬರನ್ನು ಇಂದು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಕೋರ್ಟ್ ಇಬ್ಬರನ್ನು 7 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ದೇಶ ವಿರೋಧಿ ಸುದ್ದಿಗಳನ್ನು ಪ್ರಕಟಿಸುತ್ತಿದ್ದು, ಮಾತ್ರವಲ್ಲ, ವಿದೇಶಿ ನಿಧಿ ತನಿಖೆ, ಅಕ್ರಮ ಹಣವರ್ಗಾವಣೆ ಸೇರಿದಂತೆ ಹಲವು ಪ್ರಕರಣಗಳು ನ್ಯೂಸ್‌ಕ್ಲಿಕ್ ಸಂಸ್ಥೆ ಮೇಲಿದೆ. ಕಚೇರಿ ಮೇಲಿನ ದಾಳಿ ವೇಳೆ ಪೊಲೀಸರು ಲ್ಯಾಪ್‌ಟಾಪ್ ಸೇರಿದಂತೆ ಹಲವು ಎಲೆಕ್ಟ್ರಾನಿಕ್ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ನ್ಯೂಸ್‌ಕ್ಲಿಕ್ ಜೊತೆ ಸಂಬಂಧ ಹೊಂದಿರುವ 37 ಪುರುಷರು ಹಾಗೂ 9 ಮಹಿಳೆಯರು ಸೇರಿದಂತೆ 45ಕ್ಕೂ ಹೆಚ್ಚು ಪತ್ರಕರ್ತರನ್ನು ವಿಚಾರಣೆ ನಡೆಸಲಾಗಿದೆ.