ಉಗ್ರರಿಂದ ಆತ್ಮಾಹುತಿ ದಾಳಿ; ಪಾಕ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜಮ್ಮುವಿನಲ್ಲಿ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಜಮ್ಮುಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ಫಿದಾಯೀನ್ (ಆತ್ಮಹತ್ಯಾ) ದಾಳಿ ನಡೆಸಿದ ಘಟನೆಗೆ ಕಾಶ್ಮೀರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಿನ್ನೆ ನಡೆದ ಘಟನೆಯಲ್ಲಿ ಆತ್ಮಹತ್ಯಾ ದಾಳಿ ನಡೆಸಿದ್ದ ಇಬ್ಬರು ಪಾಕಿ ಭಯೋತ್ಪಾದಕರು, ಒರ್ವ ಸಿಐಎಸ್ಎಫ್ ಅಧಿಕಾರಿ ಮೃತಪಟ್ಟು, ಒಂಬತ್ತು ಯೋಧರು ಗಾಯಗೊಂಡಿದ್ದರು.
ಉಗ್ರರ ದಾಳಿಯ ಕುರಿತು ಆಕ್ರೋಶ ವ್ಯಕ್ತಪಡಿಸಿ ಶುಕ್ರವಾರ ಜಮ್ಮು ನಗರದ ಹಲವಾರು ಪ್ರದೇಶಗಳಲ್ಲಿ ಜನರಿಂದ ತೀವ್ರ ಪ್ರತಿಭಟನೆಗಳು ನಡೆದಿವೆ. ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರ ದಾಳಿಯನ್ನು ಬಲವಾಗಿ ಖಂಡಿಸಿರುವ ಶಿವಸೇನೆಯ ಜಮ್ಮು ಮತ್ತು ಕಾಶ್ಮೀರ ಘಟಕವು, ರಾಜ್ಯದ “ಶಾಂತಿಯುತ ವಾತಾವರಣ” ವನ್ನು ಹಾಳುಗೆಡವಲು ಪಾಕ್‌ ಪ್ರೇರಿತ ಭಯೋತ್ಪಾದಕರು ಉದ್ದೇಶಪೂರ್ವಕ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕಿಡಿಕಾರಿದೆ.
ಶಿವಸೇನಾ ರಾಜ್ಯ ಘಟಕದ ಅಧ್ಯಕ್ಷ ಮನೀಶ್ ಸಾಹ್ನಿ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಪಾಕಿಸ್ತಾನದ ವಿರುದ್ಧ ಘೋಷಣೆಗಳನ್ನು ಕೂಗಿ, ಪಾಕಿಸ್ತಾನದ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪಾಕಿಸ್ತಾನದಲ್ಲಿ ಮತ್ತೊಮ್ಮೆ ಮೂಲಭೂತವಾದಿಗಳ ಆಡಳಿತ ರಚನೆಯಾಗಿದ್ದು (ಶೆಹಬಾಜ್ ಷರೀಫ್ ಸರ್ಕಾರ) ದುರಾದೃಷ್ಟಕರ. ಅದು ಕಾಶ್ಮೀರದ ವಾತಾವರಣವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ. ಹಿಂದೂ-ಮುಸ್ಲಿಂ ಭಾವೈಕ್ಯವನ್ನು ಕೆಡಿಸಲು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಎಂದು ಕಿಡಿಕಾರಿದರು.
ಕಾಶ್ಮೀರದಲ್ಲಿ ಯೋಧರನ್ನು ಹತ್ಯೆ ಮಾಡುವುದರತ ಜೊತೆಗೆ ಜಮ್ಮುವಿನ ದೇವಾಲಯಗಳನ್ನು ಧ್ವಂಸಗೊಳಿಸಲು ಸಂಚು ರೂಪಿಸಲಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!