ಅನಂತನಾಗ್ ಜಿಲ್ಲೆಯಲ್ಲಿ ರಕ್ಷಣಾ ಪಡೆಗಳಿಂದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಜ್‌ಬೆಹರಾ ಅನಂತನಾಗ್‌ನ ಮರ್ಹಮಾ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆದಿದ್ದು ಪೊಲೀಸರು, ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ಕೈಗೊಂಡಿದೆ ಎಂದು ಮೂಲಗಳು ವರದಿ ಮಾಡಿವೆ.

ಭಯೋತ್ಪಾದಕರು ಮತ್ತು ರಕ್ಷಣಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಕುರಿತು ರಕ್ಷಣಾ ಮೂಲಗಳು “ಜಂಟಿ ಶೋಧನಾ ದಳವು ಶಂಕಿತ ಸ್ಥಳವನ್ನು ಸಮೀಪಿಸುತ್ತಿದ್ದಂತೆ, ಅಡಗಿಕೊಂಡಿದ್ದ ಭಯೋತ್ಪಾದಕರು ಶೋಧನಾ ತಂಡದ ಮೇಲೆ ಮನಬಂದಂತೆ ಗುಂಡು ಹಾರಿಸಲು ಪ್ರಾರಂಭಿಸಿದರು. ಇದು ಎನ್‌ ಕೌಂಟರ್‌ ಗ ಕಾರಣವಾಯಿತು” ಎಂದು ಪ್ರತಿಕ್ರಿಯೆ ನೀಡಿವೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ ಎಂದು ಮೂಲಗಳು ಹೇಳಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!