ಹೈದರಾಬಾದ್‌ನಲ್ಲಿ ಉಗ್ರ ದಾಳಿಗೆ ಯೋಜನೆ: 16 ಮಂದಿ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗುಪ್ತಚರ ಅಧಿಕಾರಿಗಳು ಹೈದರಾಬಾದ್‌ನಲ್ಲಿ ಮತ್ತೊಮ್ಮೆ ಭಯೋತ್ಪಾದಕ ಚಟುವಟಿಕೆಗಳನ್ನು ಗುರುತಿಸಿದ್ದಾರೆ. ಹೈದರಾಬಾದ್ ನಲ್ಲಿ ಭಯೋತ್ಪಾದಕ ದಾಳಿಗಳು ನಡೆಯುತ್ತಿವೆ ಎಂಬ ಮಾಹಿತಿ ಮೇರೆಗೆ ಮಧ್ಯಪ್ರದೇಶ ಮತ್ತು ತೆಲಂಗಾಣ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಒಟ್ಟು 16 ಮಂದಿಯನ್ನು ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಭಯೋತ್ಪಾದನಾ ನಿಗ್ರಹ ದಳವು ಮಧ್ಯಪ್ರದೇಶದ ಭೋಪಾಲ್‌ನಿಂದ 11 ಜನರನ್ನು ಮತ್ತು ಹೈದರಾಬಾದ್‌ನಿಂದ ಐವರನ್ನು ಬಂಧಿಸಿದೆ.

ಕೇಂದ್ರ ಗುಪ್ತಚರ ಮಾಹಿತಿಯೊಂದಿಗೆ ಹೈದರಾಬಾದ್‌ನಲ್ಲಿ ಪರಿಶೀಲನೆಗಳು ಮಧ್ಯಪ್ರದೇಶದ ಅಧಿಕಾರಿಗಳು ಪೊಲೀಸರೊಂದಿಗೆ ಹೈದರಾಬಾದ್‌ನಲ್ಲಿ ಭಾರಿ ಕಾರ್ಯಾಚರಣೆ ನಡೆಸಿದರು. ಶಂಕಿತ 16 ಜನರನ್ನು ಎಟಿಎಸ್ ವಶಕ್ಕೆ ಪಡೆದಿದೆ. ಆರೋಪಿಗಳಿಂದ ಮೊಬೈಲ್ ಫೋನ್ ಮತ್ತು ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸುಮಾರು 18 ತಿಂಗಳಿನಿಂದ ಹೈದರಾಬಾದ್ ಆರೋಪಿಗಳು ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಯುವಕರನ್ನು ಭಯೋತ್ಪಾದನೆಯತ್ತ ಸೆಳೆಯಲು ಹಲವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಅಧಿಕಾರಿಗಳು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!